*ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿಗಳಿಗೆ ಮರುಳಾಗಬೇಡಿ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರಿಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿಗೂ ನಮ್ಮ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ನಮ್ಮ ಗ್ಯಾರಂಟಿ ಯೋಜನೆ ಫಲನುಭವಿಗಳಾ? ಗ್ಯಾರಂಟಿಗಳ ಬಗ್ಗೆ ಅವರಿಗೇನು ಗೊತ್ತಿದೆ? ಬಡವರು, ಹೆಣ್ಣುಮಕ್ಕಳ ನೋವು ಕುಮಾರಸ್ವಾಮಿಗೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಜನರನ್ನು ಕೇಳಬೇಕು. ಚನ್ನಪಟ್ಟಣದ ಮತದಾರರ ಬಳಿ ಸ್ವತಃ ನಾನೇ ಮಾತನಾಡಿದ್ದೇನೆ. ಕುಮಾರಸ್ವಾಮಿ ಬೇಕಾದರೂ ಕೇಳಲಿ ಗೊತ್ತಾಗುತ್ತದೆ ಎಂದರು.
ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತೆನೆಯೇ ಇಲ್ಲ. ಪಾಪ ಅವರಿಗೆ ಅವರು ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರಿಗೆ ಕೇಳಿ ತಿಳಿದುಕೊಳ್ಳಬೇಕು.
ಒಂದಷ್ಟು ತಾಂತ್ರಿಕ ದೋಷ ಹಾಗೂ ಇತರೇ ಕಾರಣಗಳಿಂದ ಶೇ 5 ರಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈಗ ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಿ ತಲುಪಿಸಲಾಗುತ್ತಿದೆ.
ಕಾಂಗ್ರೆರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಜನರು ಖುಷಿಯಿಂದ ಹಬ್ಬ ಆಚರಿಸುತ್ತಿದ್ದಾರೆ. ದಸರಾಗೆ ಬಂದಿದ್ದ ಜನರನ್ನು ನೋಡಿದರೆ ಗೊತ್ತಾಗುತ್ತದೆ. ಕುಮಾರಸ್ವಾಮಿ ಬಹಳ ಅರ್ಜೆಂಟ್ ನಲ್ಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ನೋಟೀಸ್ ಮೇಲೆ ನಿಲ್ಲಿಸಿದೆ ಎಂಬ ಹೆಚ್.ಡಿ.ಕೆ ಹೇಳಿಕೆಗೆ ಗರಂ ಆದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಗೂ ಹೆಚ್ ಡಿಕೆಗೂ ಏನ್ ಸಂಬಂಧ? ಅವರಿಗ್ಯಾಕೆ ನಮ್ಮ ಪಕ್ಷದ ಚಿಂತೆ? ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ಆಶಿರ್ವಾದ ಮಾಡಿದ್ದಾರೆ. ಹೈಕಮಾಂಡ್ ಸಿಎಂ ಸ್ಥಾನ ನೀಡಿದೆ. ಹೈಕಮಾಂಡ್ ಏನು ಹೇಳುತ್ತದೆ ಅದನ್ನು ನಾವು ಪಾಲಿಸುತೇವೆ ಎಂದು ಹೇಳಿದರು.
ನಾನು ತೆಲಂಗಾಣದ 5 ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದೆ. ಆ ಐದೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಡಿ. 9 ರಂದು ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಸರ್ಕಾರ ರಚಿಸಲಿದ್ದು, ಕರ್ನಾಟಕದ ಮಾದರಿಯಂತೆ 6 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.”
ಪ್ರಶ್ನೆ ಉತ್ತರ:
ಕರ್ನಾಟಕದ ಸಚಿವರಿಗೆ ಪಂಚರಾಜ್ಯ ಚುನಾವಣೆ ಸಲುವಾಗಿ ಕಮಿಷನ್ ಟಾರ್ಗೆಟ್ ಕೊಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, “ಕುಮಾರಸ್ವಾಮಿ ಅವರು ಟಾರ್ಗೆಟ್ ಕೊಟ್ಟಿರಬೇಕು. ನಮ್ಮ ಸಚಿವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಹೋಗಿ ಬರುತ್ತಿದ್ದಾರೆ. ತಾಳ್ಮೆಯಿಂದ ಇರಲು ಕುಮಾರಸ್ವಾಮಿ ಅವರಿಗೆ ಆಗುತ್ತಿಲ್ಲ. ಅವರಿಗೂ ವಿಜಯೇಂದ್ರ ಇಬ್ಬರಿಗೂ ಒಳ್ಳೆಯದಾಗಲಿ” ಎಂದರು.
ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಕೊಟ್ಟಿರುವ ನೋಟಿಸ್ ಪೀರಿಯಡ್‌ನಲ್ಲಿ ಇದ್ದಾರೆಯೇ ಎಂದು ಕೇಳಿದಾಗ
“ಕುಮಾರಸ್ವಾಮಿ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಾವೆಲ್ಲ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಬೇರೆ ಚರ್ಚೆಯೇ ಇಲ್ಲ” ಎಂದರು.
ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ
ಕರ್ನಾಟಕದ ಜನತೆಗೆ ದೀಪಾವಳಿ ಹಬ್ಬದಂದು ಸುಖ, ಸಮೃದ್ಧಿ ಒದಗಿ ಬರಲಿ” ಎಂದು ಸರ್ಕಾರದ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಶುಭಾಶಯಗಳು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ