Kannada NewsKarnataka NewsLatestPolitics

*HDK ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಮಾರಸ್ವಾಮಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸುತ್ತಾ ಈ ವಿಚಾರ ಪ್ರಸ್ತಾಪಿಸಿದರು.

ನಾಳೆಯಿಂದ ನಾನು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ನಾಯಕರುಗಳ ಜೊತೆ ಸಭೆ ಮಾಡುತ್ತಿದ್ದು, ಕೆಲವು ಸಮುದಾಯಗಳ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ಅದರ ಭಾಗವಾಗಿ ಇಂದು ಪಕ್ಷದ ಅಲ್ಪಸಂಖ್ಯಾತ ನಾಯಕರ ಜೊತೆ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

Related Articles

Back to top button