ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಪ್ರಶ್ನೆಗೆ ಆ ಬಗ್ಗೆ ನಮಗೂ ನಮ್ಮದೇ ಮೂಲಗಳಿಂದ ಮಾಹಿತಿ ಬಂದಿದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದರು.
ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜೊತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದರು.
ಇದೇ ವೇಳೆ ಮಾಜಿ ಸಚಿವ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ಬಗ್ಗೆ ನನಗೆ ಗೊತಿಲ್ಲ, ಯಾರು ಹೇಳಿದ್ದಾರೆ ಅವರನ್ನೇ ಕೇಳಿ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ