Politics

*ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು‌.

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು.

Home add -Advt

ಬೆಲೆ ಏರಿಕೆಗೆ ಕೇಂದ್ರವೇ ಕಾರಣ

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ” ಎಂದರು.

“ಬಿಜೆಪಿಯವರು ಕೇಂದ್ರದಲ್ಲಿ ಇರುವ ಅವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.

Related Articles

Back to top button