Karnataka NewsLatestPolitics

*ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, “ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ” ಎಂದು ತಿಳಿಸಿದರು.

Related Articles

Back to top button