*ಕೋಲಾರ ಅಭ್ಯರ್ಥಿ ಘೋಷಣೆ ಬಳಿಕ ಉಭಯ ಬಣಗಳಿಗೂ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: ಮುನಿಯಪ್ಪ, ರಮೇಶ್ ಕುಮಾರ್ ಜೊತೆ ಮಾತನ್ನಾಡಿದ್ದೇನೆ. ಎರಡೂ ಬಣಗಳಿಗೂ ಟಿಕೆಟ್ ಕೊಟ್ಟಿಲ್ಲ. ಅಂತಿಮವಾಗಿ ಯಾರೇ ಶಿಸ್ತು ಉಲ್ಲಂಘಿಸಿದರೂ ಕ್ರಮ ಕೈಗೊಳ್ತೇವೆ. ಶಿಸ್ತು ಉಲ್ಲಂಘನೆ ಮಾಡಿದವರೆಲ್ಲೆ ಈಗಾಗಲೇ ಕ್ಷಮೆ ಕೇಳಿದ್ದಾರೆ. ಉಭಯ ಬಣಗಳಿಗೂ ಸ್ಪಷ್ಟ ಎಚ್ಚರಿಕೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಟಿಕೇಟ್ ವಿಚಾರವಾಗಿ ಉಭಯ ಪಕ್ಷಗಳು ಅವರವರ ಅಭಿಪ್ರಾಯವನ್ನು ಹೇಳಿದ್ದಾರೆ. ಗುಂಪು ರಾಜಕಾರಣ ನಮ್ಮಲ್ಲಿ ಇಲ್ಲ ಎಂದು ಸಂದೇಶ ರವಾನೆ ಮಾಡಲಾಗಿದೆ.ಯಾರೇ ಆದರೂ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ. ಸೀಟು ಗೆಲ್ಲೋದು ಬಿಡೋದು ನಂತರದ್ದು, ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ಶಾಸಕರು, ಸಚಿವರು ಯಾರೇ ಆದರೂ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು. ಎಲ್ಲರೂ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ. ಗೌತಮ್ ಪಕ್ಷದ ಸಾಮಾನ್ಯ ಕಾರ್ಯಕರ್ತ, ಮಾಜಿ ಮೇಯರ್ ಪುತ್ರ, ಹೊಸ ಮುಖ ಗೌತಮ್ ಗೆ ಅವಕಾಶ ನೀಡಿದ್ದೇವೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ