Kannada NewsKarnataka NewsLatestPolitics

*ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧವಾಗುತ್ತಾ? ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದೇನು?*

ಪ್ರಗತಿವಾಹಿನಿ ಸುದ್ದಿ: “ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಕೇಳಿದಾಗ, “ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ” ಎಂದರು.

ಸಚಿವ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಕೇಳಿದಾಗ, “ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ” ಎಂದರು.

Home add -Advt

ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂದು ನೀಡಿರುವ ವರದಿ ಬಗ್ಗೆ ಕೇಳಿದಾಗ, “ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ. ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಬಿಡ್ಬ್ಯೂ ಎಸ್ ಎಸ್ ಬಿಯಿಂದ ಶುದ್ದಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನ‌ಮಾಡಲು ಅಲ್ಲ” ಎಂದರು.

ವಿಬಿ ಗ್ರಾಮ್ ಜೀ ವಿಚಾರವಾಗಿ ಕೇಳಿದಾಗ, “ವಿಬಿ ಗ್ರಾಮ್ ಜೀ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಹಾಗೂ ಯಾವುದೇ ನಿರ್ದೇಶನ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ. ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವ್ ಆದೋಂಲನ ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು‌.

Mobile ban for students is in discussion; pressure from parents too: DCM DK Shivakumar

Stating that there was pressure from parents to ban mobile use for students, Deputy Chief Minister DK Shivakumar today said that the ban is still under discussion.

Speaking to reporters at his Sadashivanagar residence, he said, “We have banned mobile phones in our schools too. We can’t disclose how mobiles are being misused. Mobiles in schools are banned in many other countries too. Hence a similar ban is being discussed here too.”

Asked about Minister H C Mahadevappa’s statement on dalit CM, he said, “He is our national leader. I salute him.”

When his attention was drawn to a report on non-potabiloty of water in Bengaluru lakes, he said, “The government has nowhere said that water of Bengaluru lakes are fit for bathing and drinking. This water is meant to recharge the ground water. Thippagondanahalli water is being treated by BWSSB.”

Asked about VBGRAMG, he said, “The Centre has not given any clarity on VBGRAMG. It has not even released wages for the past work. The scheme is defunct now and it is an assault on the poor. We are waging a fight to save this scheme. We are holding a protest in Chikkaballapura today.

Related Articles

Back to top button