Kannada NewsKarnataka NewsLatestPolitics

*ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Home add -Advt

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ” ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿದ್ದಾರಂತಲ್ಲ ಎಂದು ಕೇಳಿದಾಗ, “ಅವರು ಹೋಗಿ ಭೇಟಿ ಮಾಡುತ್ತಾರೆ” ಎಂದು ತಿಳಿಸಿದರು.

ಇದೇ 21ಕ್ಕೆ ಸಿಡಬ್ಲ್ಯೂಸಿ ಸಭೆ ಬಗ್ಗೆ ಕೇಳಿದಾಗ, “ಇಲ್ಲೂ ಇದೆ, ನಾಗ್ಪುರದಲ್ಲೂ ಇದೆ” ಎಂದು ತಿಳಿಸಿದರು.

Related Articles

Back to top button