Latest

ತಮ್ಮ ನಾಯಕರು ಓಡಾಡುವ ಜಾಗದಲ್ಲಿ ಮಾತ್ರ ಗುಂಡಿ ಮುಚ್ಚಿದ್ದಾರೆ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಕಿಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದವರು ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಈ ಮಧ್ಯೆ ಮತ್ತೊಬ್ಬರು ಲಂಚದ ಕಿರುಕುಳ ತಾಳಲಾರದೆ ದಯಾಮರಣಕ್ಕೆ ಅರ್ಜಿ ಹಾಕಿರುವ ವಿಚಾರ ತಿಳಿದಿದೆ. ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕಿದೆ. ಪ್ರಧಾನಿಗಳು ಬಂದಾಗ ರಸ್ತೆ ಗುಂಡಿಗಳನ್ನು ಹೇಗೆ ಮುಚ್ಚಲಾಗಿದೆಯೋ, ಅದೇ ರೀತಿ ಈ ಭ್ರಷ್ಟಾಚಾರ ಮುಚ್ಚಿ ಹಾಕ್ತಿದ್ದಾರೆ. ಪ್ರಧಾನಿಗಳು ಅವರ ನಾಯಕರಿಗೆ ಈ ಬಗ್ಗೆ ಪ್ರಶ್ನೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶಿವಕುಮಾರ್ ಅವರು ಮುಂಚಿತವಾಗಿ ಸಲಹೆ ನೀಡಿದ್ದರೆ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಪ್ರತಿಮೆ ಸ್ಥಾಪಿಸಬಹುದಿತ್ತು ಎಂಬ ಸಚಿವರ ಹೇಳಿಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ‘ನಾನು ಅಲ್ಲಿಗೆ ಹೋದ ದಿನವೇ ಈ ಪ್ರತಿಮೆಯನ್ನು ಸರ್ಕಾರ ನಿರ್ಮಾಣ ಮಾಡುವ ಅಗತ್ಯವಿಲ್ಲ. ವಿಮಾನ ನಿಲ್ದಾಣ ಆಡಳಿತ ಮಂಡಳಿಯವರೇ ಮಾಡಬಹುದು. ಅವರಿಗೆ 50-60 ಕೋಟಿ ವೆಚ್ಚ ಮಾಡುವುದು ದೊಡ್ಡ ವಿಚಾರವಲ್ಲ ಎಂದು ಹೇಳಿದ್ದೆ. ಇವರು ಅವರದೇ ಆದ ಲೆಕ್ಕಾಚಾರ ಹಾಕಿಕೊಂಡು ಮಾಡುತ್ತಿದ್ದಾರೆ. ಸರ್ಕಾರದ ಹಣ ಹೇಗೆ ಉಳಿಸಬೇಕು, ಕಾಮಗಾರಿ ಹೇಗೆ ಮಾಡಿಸಬೇಕು ಎಂಬ ಬಗ್ಗೆ ಸಾಮಾನ್ಯ ಪರಿಜ್ಞಾನ ಇರಬೇಕು. ಇವರು ತಾವು ಹೆಸರು ಮಾಡಿಕೊಳ್ಳಲು ಈ ರೀತಿ ಮಾಡಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

ಇಂದಿನ ಕಾರ್ಯಕ್ರಮಕ್ಕಾಗಿ 48 ಕೋಟಿ ರು. ವೆಚ್ಚ ಮಾಡಲಾಗಿದೆ. ತಮ್ಮ ಹಾಗೂ ಪಕ್ಷದ ವೈಭವೀಕರಣಕ್ಕೆ ಯಾವ ರೀತಿ ಹಣ ಖರ್ಚು ಮಾಡಲಾಗುತ್ತಿದೆ ಎಂಬುದರ ಬಗ್ಗೆ ಎಲ್ಲರಿಗೂ ಮಾಹಿತಿ ಇದೆ. ಅವರು ಯಾವ ರೀತಿಯಾದರೂ ಜನರನ್ನು ಕರೆದುಕೊಂಡು ಹೋಗಲಿ, ಆದರೆ ಇವರನ್ನು ಕಿತ್ತೊಗೆಯಲು ಜನ ಸಂಕಲ್ಪ ಮಾಡಿದ್ದು, ಅದು ಆಗಲಿದೆ’ ಎಂದರು.

ಬೆಂಗಳೂರಿನ ರಸ್ತೆಗುಂಡಿಗಳನ್ನು ತರಾತುರಿಯಲ್ಲಿ ಮುಚ್ಚಿದ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ್, ‘ಅವರು ತಮ್ಮ ನಾಯಕರ ಪ್ರಯಾಣಕ್ಕೆ ರಸ್ತೆ ಮಾಡಿದ್ದಾರೆಯೇ ಹೊರತು ಜನರ ಅನುಕೂಲಕ್ಕೆ ಮಾಡಿಲ್ಲ’ ಜನರು ಓಡಾಡುವ ರಸ್ತೆ ಎಲ್ಲಿ ಮಾಡಿದ್ದಾರೆ ನಾಯಕರು ಓಡಾಡುವ ರಸ್ತೆಯಲ್ಲಿ ಮಾತ್ರ ಗುಂಡಿಮುಚ್ಚಿದ್ದಾರೆ ಎಂದು ತಿಳಿಸಿದರು.

ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿಯೇ ಅಭಿವೃದ್ಧಿ ಸಂಕಲ್ಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://pragati.taskdun.com/politics/pm-modikempegowda-statueinaugurationcm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button