
ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದರು.
ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
“ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ” ಎಂದರು.
ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ
“ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ” ಎಂದರು.
“ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ” ಎಂದು ಹೇಳಿದರು.
ನೋಟಿಸ್ ನೀಡಲು ಅವರು ಯಾರು
ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ” ಎಂದು ಖಡಕ್ಕಾಗಿ ಉತ್ತರಿಸಿದರು.
Some empty vessels in BJP are making noise but no funds for Karnataka: DCM DK Shivakumar
Bengaluru, Aug 11: Hitting out at the motormouths in BJP, Deputy Chief Minister DK Shivakumar today said they should try to get some funds for the state instead of putting up a show in Parliament.
Speaking to reporters at a private hotel, he said, “I will send out all the details on the grants for the state to them. They have neither shown interest nor got any funds for the state till now. They have not even met the PM regarding funds for the state.”
I have faith in PM’s words
“I have spoken to the PM regarding funds for Bengaluru city. He has assured us of looking into it. He agrees that Bengaluru is a global city which represents India abroad,” he said.
“All political parties have contributed to the development of Bengaluru City. I won’t say everything happened because of me or my party. It is our responsibility to make Bengaluru the best city. State’s interest is more important than politics,” he added.
Who is Election Commission to give notice
Asked about Election Commission issuing a notice to Rahul Gandhi, he said, “Let them issue a notice. In the first place, who are they to issue notice. We have the power the issue notice. They have the authority to conduct free and fair elections but don’t have power to issue notices. We will respond to it legally.”