LatestPolitics

*BREAKING: ಇನ್ನೂ ಮೂರ್ನಾಲ್ಕು ಜನರ ಮೇಲೆ ದಾಳಿಯಾಗಬಹುದು: ಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ*

ಪ್ರಗತಿವಾಹಿನಿ ಸುದ್ದಿ: ಇನ್ನೂ ಮೂರ್ನಾಲ್ಕು ಜನರ ಮೇಲೆ ಇಡಿ ದಾಳಿ ನಡೆಯಬಹುದು. ಈ ಬಗ್ಗೆ ಮಾಹಿತಿ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ ಬೆನ್ನಲ್ಲೇ ಇಂದು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಇನ್ನೂ ಮೂರ್ನಾಲ್ಕು ಸಚಿವರ ಮೇಲೆ ದಾಳಿಯಾಗುವ ಸಾಧ್ಯತೆ ಇದೆ ಎಂದರು.

ಇಡೀ ಕಾಂಗ್ರೆಸ್ ಪಕ್ಷವನ್ನು ಟಾರ್ಗೆ ಮಾಡಲಾಗುತ್ತಿದೆ. ಸಮುದಾಯ ಮಾತ್ರವಲ್ಲ, ಇಡೀ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗುತ್ತಿದೆ. ಎಲ್ಲವೂ ರಾಜಕಾರಣ ಎಂದು ಕಿಡಿಕಾರಿದರು. ಹೊರಗಡೆ ವ್ಯವಹಾರ ಮಾಡಬಾರದು ಎಂದು ಎಲ್ಲಿದೆ. ಕೇಲವ ಇಲ್ಲಿ ಮಾತ್ರ ವ್ಯವಹಾರ ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಹೊರಗಡೆಯೂ ವ್ಯವಹಾರ ಮಾಡಬಹುದು ಎಂದರು.

ಸತೀಶ್ ಜಾರಕಿಹೊಳಿಯವರು ನಮ್ಮ ಆಪ್ತರು. ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಲ್ಲದಕ್ಕೂ ಅವರು ಉತ್ತರ ನೀಡಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ. ಈ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button