*ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ ಪ್ರತಿಕ್ರಿಯೆಯೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಮನೂರು ಶಿವಶಂಕರಪ್ಪ ಅವರು ಏಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಮತ್ತು ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡ ಸಿಎಂ ಸ್ಥಾನ ಬೇಕು ಎನ್ನುವ ಹೇಳಿಕೆಯನ್ನು ಮಾಧ್ಯಮದವರು ಪ್ರಸ್ತಾಪಿಸಿದಾಗ, ಹೇಳಿಕೆ ಬಗ್ಗೆ ನನಗೆ ತಿಳಿದಿಲ್ಲ, ತಿಳಿದುಕೊಂಡು ಮಾತನಾಡುತ್ತೇನೆ ಎಂದರು.
ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡುತ್ತಿದ್ದಾರೆ. ನಮ್ಮ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದರು. ಅಲ್ಲದೇ ವೀರಶೈವ ಲಿಂಗಾಯಿತರಿಗೆ ಡಿಸಿಎಂ ಸ್ಥಾನವಲ್ಲ, ಡಿಸಿಎಂ ತೆಗೆದುಕೊಂಡು ಏನ್ ಮಾಡೋದು ಆದರೆ ಸಿಎಂ ಆಗಬೇಕು. ಅದಕ್ಕೆ ನಮ್ಮ ಬೇಡಿಕೆ ಇದ್ದೇ ಇದೆ ಎಂದು ಹೇಳಿಕೆ ನೀಡಿದ್ದರು.
ಇನ್ನು ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದ ಮ್ಯಾಜಿಸ್ಟ್ರೇಟ್ ವರದಿಯನ್ನು ಟೀಕಿಸಿದ್ದ ನೀವು ಈಗ ಸ್ವೀಕರಿಸಿದ್ದೀರಿ ಎಂಬ ಸುದ್ದಿಗರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇದಕ್ಕೆ ಗೃಹ ಸಚಿವರಾದ ಪರಮೇಶ್ವರ್ ಅವರು ಉತ್ತರಿಸುತ್ತಾರೆ” ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ