Politics

*ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರ್ತಾರಂತೆ?*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರ್ತಾರೆ ಎಂದು ನಾವೆಲ್ಲರೂ ಭಾವಿಸಿದ್ದೇವೆ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಹೌದೆಂಬಂತೆ ತಲೆಯಾಡಿಸಿದ್ದಾರೆ.

ವಿಧಾನಸೌಧದಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸುದ್ದಿಗಾರರ ಪ್ರಶ್ನೆಗೆ ತಲೆಯಾಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರಲಿದ್ದಾರೆ ಎಂಬುದಕ್ಕೆ ತಲೆಯಾಡಿಸಿದರು.

ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಮ್ತ್ರಿಯಾಗಿರಲಿದ್ದಾರೆ ಎಂದು ನಾವು ಭಾವಿಸಿದ್ದೇವೆ. ಸಿದ್ದರಾಮಯ್ಯ ಅವರು ದೀರ್ಘಾವಧಿಯ ಸಿಎಂ ಆಗಲಿ ಎಂದೇ ನಾನು ಹಾರೈಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೌದೆಂಬಂತೆ ತಲೆಯಾಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button