LatestUncategorized

*141 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು; ಮೇ 15ರಂದು ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆ ಎಂದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 2 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನವೊಲಿಸಲು ಕೊನೇ ಹಂತದ ಕಸರತ್ತು ನಡೆಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದರೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಈಬಾರಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕಮಲ ನಾಯಕರು ಹೇಳುತ್ತಿದ್ದಾರೆ.

ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಮೇ 15ರಂದು ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟದ ಸಭೆ ನಡೆಯಲಿದೆ. ಚುನಾವಣಾ ಪ್ರಚಾರದಲ್ಲಿ ಘೋಷಿಸಿದ 5 ಗ್ಯರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಮೇ 15ರಂದು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

https://pragati.taskdun.com/d-k-shivakumarrectionelection-commission-notice/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button