
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಈ ಬಾರಿಯ ವಿಶ್ವಕಪ್ ಅನ್ನು ಟೀಂ ಇಂಡಿಯಾ ಗೆದ್ದೇ ಗೆಲ್ಲುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಸಂಸ್ಥೆಗೆ ನೀಡಿದ ಶುಭ ಸಂದೇಶದಲ್ಲಿ ಈ ಹಿಂದೆಯೂ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಬಾರಿ ಇತಿಹಾಸ ಮರುಕಳಿಸಲಿದೆ. ನಮ್ಮ ತಂಡ ವಿಶ್ವಕಪ್ ಗೆಲ್ಲಲಿದೆ ಎಂಬುದು ಕೇವಲ ನನ್ನ ಆತ್ಮವಿಶ್ವಾಸ ಮಾತ್ರವಲ್ಲ, ಇಡೀ ಭಾರತೀಯರ ಆತ್ಮವಿಶ್ವಾಸವಾಗಿದೆ. ರಾಜ್ಯ ಸರ್ಕಾರದ ಪರವಾಗಿ ಭಾರತ ಕ್ರಿಕೆಟ್ ತಂಡದ ಸದಸ್ಯರಿಗೆ ಶುಭ ಕೋರುತ್ತೇನೆ. ಎಲ್ಲರೂ ನಮ್ಮ ತಂಡವನ್ನು ಬೆಂಬಲಿಸುತ್ತಾ, ಫೈನಲ್ ಪಂದ್ಯವನ್ನು ನೋಡಿ ಆನಂದಿಸೋಣ ಎಂದರು.