Latest

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ; ಶಾಸಕ ಜಮೀರ್ ಗೆ ಡಿಕೆಶಿ ವಾರ್ನಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗಾಗಿ ನಾಯಕರ ನಡುವೆ ಭಾರಿ ಪೈಪೋಟಿ ಆರಂಭವಾಗಿದ್ದು, ಈ ನಡುವೆ ಶಾಸಕ ಜಮೀರ್ ಅಹ್ಮದ್ ಮತ್ತೆ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ಶಾಸಕ ಜಮೀರ್ ಅಹ್ಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದರು. ಆದಾಗ್ಯೂ ಇದೀಗ ಮತ್ತೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿರುವ ಜಮೀರ್ ಅಹ್ಮದ್, ಸಿದ್ದರಾಮಯ್ಯನವರೇ ಮತ್ತೆ ಸಿಎಂ ಆಗಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಪಕ್ಷದ ವಿಚಾರವಾಗಿ ಹೈಕಮಾಂಡ್ ಏನೇ ತೀರ್ಮಾನ ಮಾಡಲಿ ಅದೇ ಬೇರೆ. ಆದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

Related Articles
Home add -Advt

ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಮುಜುಗರಕೀಡಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಿ. ಆನಂತರ ಸಿಎಂ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.

ಯಾವುದೇ ಒಂದು ಸಮುದಾಯವನ್ನು ನಂಬಿದರೆ ಪಕ್ಷ ಅಧಿಕಾರಕ್ಕೆ ಬರಲ್ಲ. ಮೊದಲು ಬಾಯಿಮುಚ್ಚಿಕೊಂಡು ಕೆಲಸ ಮಾಡಿ. ಪಕ್ಷವನ್ನು ಅಧಿಕಾರಕ್ಕೆ ತನ್ನಿ. ನಿಮ್ಮ ನಿಮ್ಮ ಸಮುದಾಯದ ಜನರನ್ನು ಸೆಳೆಯುವ ಕೆಲಸ ಮಾಡಿ. ವ್ಯಕ್ತಿ ಪೂಜೆ ಬಿಟ್ಟು ಪಕ್ಷದ ಪೂಜೆ ಮಾಡಿ ಎಂದು ಖಡಕ್ ಆಗಿ ಹೇಳಿದ್ದಾರೆ.
ED ಅಧಿಕಾರಿಗಳಿಂದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಬಂಧನ

Related Articles

Back to top button