Kannada NewsKarnataka NewsLatestPolitics

*ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ಪ್ರವಾಸ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಡಾವೊಸ್ ಪ್ರವಸ ದಿಢೀರ್ ರದ್ದಾಗಿದೆ. ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ತಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ತೆರಳಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ರವಾಸವನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಡಾವೊಸ್ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜ. 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗವಹಿಸಬೇಕಾಗಿದೆ.

Home add -Advt


Related Articles

Back to top button