
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಕೃತ್ಯಕ್ಕೆ ಪೊಲೀಸರೇ ದಂಗಾಗಿದ್ದಾರೆ.
ಡಿ.ಕೆ.ಶಿವಕುಮಾರ್ ಒಡೆತನದ ಬೆಂಗಳೂರಿನ ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ನಿನ್ನೆ ಬಾಂಬ್ ಬೆದರಿಕೆಯೊಡ್ಡಲಾಗಿತ್ತು. ಈ ಮೇಲ್ ಮೂಲಕ ಕಿಡಿಗೇಡಿಗಳು ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಹೆದರಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲಿಸರು ಇದೀಗ ಅದೇ ಶಾಲೆಯ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.
ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿದ್ದು, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂಬುದು ಗೊತ್ತಾಗಿದೆ. ಜುಲೈ 21ರಿಂದ ಆರಂಭವಾಗಲಿದ್ದ ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ವಿದ್ಯಾರ್ಥಿ, ನಟ ಹುಚ್ಚ ವೆಂಕಟ್ ಹೆಸರಲ್ಲಿ ಶಾಲೆಗೆ ಇಮೇಲ್ ಕಳುಹಿಸಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಇದೀಗ ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಟ್ರಕ್ ಹರಿಸಿ DYSP ಹತ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ