Kannada NewsKarnataka NewsLatestPolitics

*ಅನಧಿಕೃತ ಬ್ಯಾನರ್: ಕಾಂಗ್ರೆಸ್ ಸಮಿತಿಗೆ 50,000 ರೂ ದಂಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ(ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000/- ರೂ. ದಂಡ ವಿಧಿಸಲಾಗಿದೆ.

ವಸಂತನಗರ ವಾರ್ಡ್-93 ವ್ಯಾಪ್ತಿಯ ಕ್ಲೀನ್ಸ್ ರಸ್ತೆಯ ಸ್ವತ್ತಿನ ಸಂಖ್ಯೆ:12/1 ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ರವರುಗಳು ಮಾಜಿ ಪ್ರಧಾನಿ ಆಧುನಿಕ ಭಾರತದ ಹರಿಕಾರ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ದಿ‌. ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವುದು ಕಂಡುಬಂದಿತ್ತು.

ಸದರಿ ಸ್ವತ್ತಿನಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆವತಿಯಿಂದ ಅಧಿಕೃತವಾಗಿ ಪರವಾನಿಗೆ/ಅನುಮತಿಯನ್ನು ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ 50,000/- ರೂ.ಗಳ ದಂಡವನ್ನು ವಿಧಿಸಲಾಗಿದ್ದು, ಮುಖ್ಯ ಆಯುಕ್ತರ ಖಾತೆಗೆ ದಂಡದ ಮೊತ್ತ ಪಾವತಿಸುವಂತೆ ಬಿಬಿಎಂಪಿ ಸೂಚಿಸಿದೆ.

Home add -Advt

Related Articles

Back to top button