ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ಮುಂದುವರೆದಿದ್ದು, ಶಾಸಕಾಂಗ ಪಕ್ಷಸಭೆಯಲ್ಲಿ ಸಿಎಂ ಆಯ್ಕೆ ವಿಚಾರ ಬಗೆಹರಿಯಲಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರಿನ ವಸಂತನಗರದಲ್ಲಿರುವ ಶಾಂಗ್ರಿಲಾ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬಿಡಲು ಶಾಸಕರೆಲ್ಲರೂ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ನೂತನ ಸಿಎಂ ಆಯ್ಕೆ ವಿಚಾರ ಹೈಕಾಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದೆ.
ಕಾಂಗ್ರೆಸ್ ನ ಎಲ್ಲಾ ನೂತನ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಎಐಸಿಸಿ ವೀಕ್ಷಕರಾಗಿ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ದೀಪಕ್ ಬಬಾರಿಯಾ ಮೊದಲಾದವರು ಉಪಸ್ಥಿತರಿದ್ದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ 65, ಜೆಡಿಎಸ್ 19 ಹಾಗೂ ಇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ