Kannada NewsKarnataka NewsLatestPolitics

*ಸುಗಂಧರಾಜ ಹೂವಿನ ಹಾರ ಹಾಕಬೇಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*

ಪ್ರಗತಿವಾಹಿನಿ ಸುದ್ದಿ: “ನನಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ ನನ್ನ ಭೇಟಿ ವೇಳೆ ಆ ಹೂವಿನ ಹಾರ ನಿಷೇಧಿಸಲಾಗಿದೆ. ಯಾರೂ ಸುಗಂಧರಾಜ ಹೂವಿನ ಹಾರ ತರಬಾರದು” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

“ಕಾರ್ಯಕರ್ತರ ಉತ್ಸಾಹ ನನಗೆ ಅರ್ಥವಾಗುತ್ತದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ಸರಳವಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಆಗುವುದಿಲ್ಲ” ಎಂದು ಹೇಳಿದರು.

ಕಾರ್ಯಕರ್ತರೇ ಸಿಎಂ ಆಗುತ್ತಿದ್ದಾರೆ

Home add -Advt

ರಾಜ್ಯದೆಲ್ಲೆಡೆ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ ಎಂದು ಕೇಳಿದಾಗ, “ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಸಿಎಂ ಆಗುತ್ತಿರುವುದು ನಾನಲ್ಲ, ಕಾರ್ಯಕರ್ತರೇ ಸಿಎಂ ಆಗುತ್ತಿದ್ದಾರೆ. 1979 ರಿಂದ ನಾನು ಪಕ್ಷದಲ್ಲಿ ವಿದ್ಯಾರ್ಥಿ ನಾಯಕನಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಹೀಗಾಗಿ ಸಂಭ್ರಮಿಸುತ್ತಿದ್ದಾರೆ” ಎಂದು ತಿಳಿಸಿದರು.

ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ಹಾಗೂ ಸಿದ್ದರಾಮಯ್ಯ ಅವರು ಹೋಗುತ್ತಿದ್ದೇವೆ” ಎಂದು ತಿಳಿಸಿದರು.

ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿ ಬಗ್ಗೆ ಕೇಳಿದಾಗ, “ಅವರು ನನ್ನ ಸಹೋದ್ಯೋಗಿ. ಪಕ್ಷದಲ್ಲಿ ಈ ಹಿಂದೆಯೂ ಅವರೊಟ್ಟಿಗೆ ಕೆಲಸ ಮಾಡಿರುವೆ, ಮುಂದೆಯೂ ಕೆಲಸ ಮಾಡುವೆ” ಎಂದು ತಿಳಿಸಿದರು.

Related Articles

Back to top button