Karnataka NewsLatestPolitics

*ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ನೋಡಲು ತಮಿಳುನಾಡು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಬೆಂಗಳೂರಿಗೆ ಆಗಮಿಸಲಿದ್ದು, ಆಗಸ್ಟ್ 3ರಂದು ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸಭೆ ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಬರಗಾಲ ಆರಂಭವಾಗಿದ್ದು, ಮುಂಗಾರು ಮಳೆ ಕೈಕೊಟ್ಟಿದೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಅಭಾವದಿಂದಾಗಿ ರೈತರು ಪರದಡುತ್ತಿದ್ದಾತ್ತಿದ್ದಾರೆ. ಇದರ ಮಧ್ಯೆ CWRC ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್​ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದ್ದು, ಈ ಆದೇಶಕ್ಕೆ ಕರ್ನಾಟಕದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು. ರಕ್ತ ಕೊಟ್ಟೆವು ನೀರು ಕೊಡಲ್ಲ ಎಂದು ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಇಂತಹ ಸಂಫ಼್ದರ್ಭದಲ್ಲೇ ತಮಿಉನಾಡು ಸಿಎಂ ವಿಜಯ್, ಕಾವೇರಿ ನದಿ ನೀರು ವಿಚಾರವಾಗಿ ಮಾತುಕತೆಗಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಲಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ನೋಡಿ ಎಂದು ಸಿಎಂ ವಿಜಯ್ ಅವರಿಗೆ ನಾವು ಮನವಿ ಮಾಡಿದ್ದೇವೆ. ಕಾವೇರಿ ಜಲಾನಯನ ಪ್ರದೇಶದ ಸ್ಥಿತಿ ಹೇಗಿದೆ ಎಂಬುದನ್ನು ನೋಡಲು ಅವರಿಗೆ ಅಗತ್ಯವಿರುವ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದೂ ಹೇಳಿದ್ದೇನೆ. ಅವರಿಗೂ ವಾಸ್ತವ ಪರಿಸ್ಥಿತಿ ಅನುಭವ ಆಗಬೇಕು. ನಂತರ ಅವರ ತೀರ್ಮಾನ ಏನು ಎಂದು ನೋಡೋಣ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button