*ತೆಲಂಗಾಣಕ್ಕೆ ಹೋಗುತ್ತೇನೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ತೆಲಂಗಾಣ ಚುನಾವಣೆ ಫಲಿತಾಂಶ ಬರುವ ಹಿನ್ನೆಲೆಯಲ್ಲಿ ತಾವು ತೆರಳುತ್ತೀರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು. ನನ್ನ ಕ್ಷೇತ್ರದಲ್ಲಿ ಇಂದು ಜನ ಸಂಪರ್ಕ ಸಭೆ ಇಟ್ಟುಕೊಂಡಿದ್ದೇನೆ. ನನ್ನ ಜನರ ಅಹವಾಲು ಸ್ವೀಕರಿಸಲು ಹೋಗುತ್ತಿದ್ದೇನೆ. ನಂತರ 10 ದಿನಗಳ ಕಾಲ … Continue reading *ತೆಲಂಗಾಣಕ್ಕೆ ಹೋಗುತ್ತೇನೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್*