Latest

ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ; ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ; ಡಿ.ಕೆ.ಶಿವಕುಮಾರ್ ಆರೋಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಡಿ ಅಧಿಕಾರಿಗಳು ಹೊಸದಾಗಿ ತಮ್ಮ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಕಿಡಿಕಾರಿದ್ದಾರೆ.

Home add -Advt

ಸಚಿವರೊಬ್ಬರು 40% ಕಮಿಷನ್‌ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್‌ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು 40% ಕಮಿಷನ್‌ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. BJP ಪ್ರಾಯೋಜಿತ PSI ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಸರಣಿ ಟ್ವೀಟ್ ಮೂಲಕ ಗುಡುಗಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು; ಲವ್ ಜಿಹಾದ್ ಗೆ ಬಲಿ ಆರೋಪ

Related Articles

Back to top button