Uncategorized

ಇದು ಇಲ್ಲಿಗೆ ನಿಲ್ಲದಿದ್ದರೆ ಸಮುದಾಯದ ವ್ಯಕ್ತಿಯಾಗಿ ಹೋರಾಟ; ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಯಕರು ಹುಟ್ಟುಹಾಕಿರುವ ಉರಿಗೌಡ, ನಂಜೇಗೌಡ ವಿಚಾರ ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ಆದಿಚುಂಚನಗಿರಿ ಮಠದ ಅಂಗಳದಿಂದಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್, ದೇವರಿಗೆ ವಿಸಹೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಅಶ್ವತ್ಥನಾರಾಯಣನೇ ಉರಿಗೌಡ, ಸಿ.ಟಿ.ರವಿಯೇ ನಂಜೇಗೌಡ. ಬಿಜೆಪಿಗರೇ ಸೃಷ್ಟಿಸಿರುವ ಪಾತ್ರಗಳಿವು ಎಂದು ಕಿಡಿಕಾರಿದರು.

ಈಗಾಗಲೇ ನಿರ್ಮಲಾನಂದ ಸ್ವಾಮೀಜಿ ಈ ಬಗ್ಗೆ ಮಾತನಾಡಿದ್ದಾರೆ. ಸರಿಯಾಗಿ ಮಾಹಿತಿ ಗೊತ್ತಿರದ ವಿಷಯವಾಗಿ ಚರ್ಚೆ ಮಾಡುವುದು ಸರಿಯಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಸಚಿವ ಮುನಿರತ್ನ ಸಿನಿಮಾ ನಿರ್ಮಾಣದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇದನ್ನು ಇಲ್ಲಿಗೆ ನಿಲ್ಲಿಸಿದರೆ ಒಳ್ಳೆಯದು. ಇಲ್ಲವಾದರೆ ಹೋರಾಟ ಮಾಡುತ್ತೇವೆ. ಪಕ್ಷ ಬಿಟ್ಟು ಸಮುದಾಯದ ವ್ಯಕ್ತಿಯಾಗಿ ನಾನು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button