Kannada NewsKarnataka NewsLatestPolitics

*ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ವ್ಯಕ್ತಪಡಿಸಿದ ಡಿಸಿಎಂ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ಹಾಗೂ ಟೆಂಪಲ್ ರನ್ ಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತೊಡಗಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಗೋಕರ್ಣ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಗಣಪತಿ ಹಾಗೂ ಮಹಾಬಲೇಶ್ವರ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಹಾಗಣಪತಿ ಹಾಗೂ ಆತ್ಮಲಿಂಗ ವಿಶೇಷ ಪೂಜೆ ವೇಳೆ ಅರ್ಚಕರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿ ಪೂಜೆ ಮಾಡಿಸಿದ್ದು ವಿಶೇಷವಾಗಿತ್ತು.

Home add -Advt

ಅರ್ಚಕರ ಸಂಕಲ್ಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದ್ದರಲ್ಲಿ ತಪ್ಪೇನಿಲ್ಲ. ಅವರು ಆಸೆಪಟ್ಟು ಪೂಜೆ ಮಾಡಿದ್ದಾರೆ ಎಂದರು.

ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತೇವೆ. ಕೆಲವರು ನನ್ನನ್ನು ಸಿಎಂ ಆಗಲಿ ಎಂದು ಹೇಳುತ್ತಿದ್ದಾರೆ. ಅವರವರ ಆಸೆ. ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನ ಕೈಗೊಳ್ಳುತ್ತದೆ ಎಂದರು.

ಇನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಒಳ್ಳೆಯ ಮಳೆ, ಬೆಳೆ ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

Related Articles

Back to top button