ಅಪ್ಪು ಕೊನೆಯ ಚಿತ್ರ ಜೇಮ್ಸ್ ಪ್ರದರ್ಶನಕ್ಕೆ ಬಿಜೆಪಿಯಿಂದ ಅಡ್ಡಿ? : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟೀಕರಣ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಅಡ್ಡಿ ಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಪ್ರದಯೇಶಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುವ ಬಗ್ಗೆ ಇಂದು ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Home add -Advt

ಕಾಶ್ಮೀರಿ ಫೈಲ್ಸ್ ಚಿತ್ರಕ್ಕಾಗಿ ಜೈಮ್ಸ್ ಚಿತ್ರವನ್ನು ತೆರವು ಮಾಡಲಾಗುತ್ತಿದೆ. ಬಿಜೆಪಿಯವರೇ ಈ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಚಿತ್ರ ನಿರ್ಮಾಪಕರೂ ಅಂತಹ ಸಂಶಯ ವ್ಯಕ್ತಪಡಿಸಿದ್ದರು.

“ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಮಾತನಾಡಿದ್ದೇನೆ. ತೊಂದರೆಯಾಗಿರುವಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ. ಸಂಬಂಧಪಟ್ಟ ನಿರ್ಮಾಪಕರು, ಚಿತ್ರಮಂದಿರದವರಿಗೆ ಇದನ್ನು ಸರಿಪಡಿಸುವ ಅಧಿಕಾರವಿದೆ. ನಟ ಶಿವರಾಜ್ ಕುಮಾರ್ ಅವರ ಬಳಿಯೂ ಮಾತನಾಡಿದ್ದೇನೆ. ತೊಂದರೆ ಇದ್ದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಥವಾ ನನ್ನ ಗಮನಕ್ಕೆ ತರಬೇಕೆಂದು ತಿಳಿಸಿದ್ದೇನೆ. ಅವರೂ ಸಹ ಒಪ್ಪಿದ್ದಾರೆ. ಕಾಂಗ್ರೆಸ್ ನವರು ಸಿನಿಮಾದಲ್ಲಿಯೂ ರಾಜಕಾರಣ ಮಾಡುವಷ್ಟು ಕೆಳಮಟ್ಟಕ್ಕೆ ಹೋಗಿದ್ದಾರೆ” ಎಂದರು.

ಕೆಜಿಎಫ್ ದಾಖಲೆ ಮುರಿದ ಜೇಮ್ಸ್

ಆಶಾ ಕಾರ್ಯಕರ್ತೆಯರಿಗೆ ತೀವ್ರ ಮುಜುಗರಕ್ಕೆ ಕಾರಣವಾಗಿದೆ ಜಾಗೃತಿ ಕಿಟ್‌ನಲ್ಲಿರುವ ಆ ವಸ್ತು !

Related Articles

Back to top button