*ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಈಗ ಯಾರ್ಯಾರು ಪಕ್ಷದ ಸೂಚನೆ ಮೀರಿ ಮಾತನಾಡಿದ್ದಾರೋ ಅವರಿಗೆಲ್ಲಾ ನೋಟಿಸ್ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಅಧಿಕಾರ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಸಚಿವರು, ಶಾಸಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಯಾವ ಅಧಿಕಾರ ಹಂಚಿಕೆ? ಹಂಚಿಕೆ ಮಾಡಲು ಇದೇನು ಆಸ್ತಿಯೇ?ಯಾವುದೇ ಆಸ್ತಿಯಿಲ್ಲ ಹಂಚಿಕೊಳ್ಳೋಕೆ. ಇಲ್ಲದ ಚರ್ಚೆಯನ್ನು ಅನಗತ್ಯವಾಗಿ ಹುಟ್ಟುಹಾಕುವ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳ ಮೇಲೆ ಗರಂ ಆದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ದೆಹಲಿಯಲ್ಲಿಯೇ ಸ್ಪಷ್ಟವಾಗಿ ಹೇಳಲಾಗಿದೆ. ಅನಗತ್ಯವಾಗಿ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಸೂಚಿಸಲಾಗಿದೆ. ಸೂಚನೆ ಮೀರಿ ಮಾತನಾಡುವವರಿಗೆಲ್ಲ ನೋಟೀಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದ ನಂತರ, ಇಬ್ಬರೂ ಸೇರಿ ಪ್ರಮಾಣವಚನ ಸ್ವೀಕರಿಸಿದ್ದೇವೆ. ಆಗ ನಿಮಗೆಲ್ಲಾ ಹೇಳಿದ್ವಾ ನಾವು? ಸುಮ್ಮನೆ ಯಾಕೆ ಇಲ್ಲದ ವಿಷಯ ನೀವೇ ಸೃಷ್ಟಿ ಮಾಡಿಕೊಳ್ಳುತ್ತೀರಾ? ಇದೆಲ್ಲಾ ಅವಶ್ಯಕತೆಯಿಲ್ಲ” ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ