Kannada NewsKarnataka NewsLatest

ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಸಕ್ಸಸ್  – ಡಿ.ಕೆ.ಶಿವಕುಮಾರ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು.

Home add -Advt

ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು.

ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ ಜನ ಬೆಂಬಲ ಸಿಗುತ್ತಿದೆ. ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಸಕ್ಸಸ್ ಗೆ ಕಾರಣವಾಗಲಿದೆ ಎಂದು ಶಿವಕುಮಾರ ಹೇಳಿದರು.

ಬಿಜೆಪಿ ನುಡಿದಂತೆ ನಡೆಯಲಿಲ್ಲ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಾಗಾಗಿ ನಾವು ಬೆಳಗಾವಿಯಲ್ಲಿ ಸುಲಭವಾಗಿ ಗೆಲುವು ಸಾಧಿಸುತ್ತೇವೆ ಎಂದರು.

ಈ ಚುನಾವಣೆ ಬರಬಾರದಿತ್ತು. ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಅನಿವಾರ್ಯವಾಗಿ ಚುನಾವಣೆ ಎದುರಿಸಬೇಕಾಗಿ ಬಂದಿದೆ ಎಂದೂ ಅವರು ಹೇಳಿದರು.

ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಗರು ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ನನ್ನನ್ನು ಸ್ವಾಗತಿಸುತ್ತಿರುವುದಕ್ಕೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್ ಸೇರಿದಂತೆ ಹಲವಾರು ಮುಖಂಡರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನದ ಮೇಲೆ ಕಲ್ಲು, ಚಪ್ಪಲಿ ಎಸೆದ ರಮೇಶ್ ಜಾರಕಿಹೊಳಿ ಬೆಂಬಲಿಗರು

ಬೆಳಗಾವಿಗೆ ಇಂದು ಡಿ.ಕೆ.ಶಿವಕುಮಾರ್ ಎಂಟ್ರಿ; ಕುತೂಹಲ

Related Articles

Back to top button