Kannada NewsKarnataka NewsLatestPolitics

*BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ ಯಂಗ್ ಇಂಡಿಯನ್ ಗೆ ಹಣಕಾಸು ವಹಿವಾಟಿನ ವಿವರ ಕೋರಿ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಡಿಸೆಂಬರ್ 19ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಯಂಗ್ ಇಂಡಿಯನ್ ಗೆ ಡಿ.ಕೆ.ಶಿವಕುಮಾರ್ ವೈಯಕ್ತಿಕವಾಗಿ 25 ಲಕ್ಷ ದೇಣಿಗೆ ನೀಡಿದ್ದರು. ಸಹೋದರ ಡಿ.ಕೆ ಸುರೇಶ್ ಕೂಡ 25 ಲಕ್ಷ ದೇಣಿಗೆ ನೀಡಿದ್ದರು. ಇಬ್ಬರೂ ಸೇರಿ 50 ಲಕ್ಷ ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಜಾರಿ ನಿರ್ದೇಶನಾಲಯದ ವರದಿ ಪ್ರಕಾರ ಡಿ.ಕೆ.ಶಿವಕುಮಾರ್ ಟ್ರಸ್ಟ್ ನಿಂದ 2.5 ಕೋಟಿ ದೇಣಿಗೆ ನೀಡಿರುವ ಆರೋಪವಿದೆ. ಈ ನಿಟ್ಟಿನಲ್ಲಿ ಈಗಾಗಲೇ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿಚಾರಣೆ ನಡೆಸಿದ್ದರು. ಈಗ ಇದೇ ಕೇಸ್ ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಡಿ.ಕೆ.ಶಿವಕುಮಾರ್ ಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button