Latest

*ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್*

ಪ್ರಗತಿವಾಹಿನಿ ಸುದ್ದಿ: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಇಂದು ಜಾರಿ ನಿರ್ದೇಶನಾಲಯ-ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.

Home add -Advt

ಕಳೆದ ಮಂಗಳವಾರ ನೋಟಿಸ್ ನೀಡಿದ್ದ ಇಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು, ಅದರಂತೆ ಡಿ..ಕೆ ಸುರೇಶ್ ಇಂದು ಬೆಂಗಳೂರಿನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದರು.

ಇಡಿ ವಿಚಾರಣೆಗೆ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ವಂಚನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನನ್ನ ಪಾತ್ರವೂ ಇಲ್ಲ ಎಂದು ಹೇಳಿದರು.

ವಿಚಾರಣೆಗೂ ಮುನ್ನ ಮಾತನಾಡಿದ ಡಿ.ಕೆ.ಸುರೇಶ್, ಇಡಿ ವಿಚಾರಣೆಗೆ ಹಾಜರಾಗುತ್ತೇನೆ. ಇಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಐಶ್ವರ್ಯ ಗೌಡ ಜೊತೆ ಯಾವುದೇ ವ್ಯವಹಾರವೂ ಇಲ್ಲ. ಆ ಮಹಿಳೆ ನನ್ನ ಸಹೋದರಿ ಎಂದು ಹೇಳಿಕೊಂಡಿದ್ದಾಳೆ. ಆಕೆ ಜೊತೆ ಯಾವುದೇ ವ್ಯವಹಾರವೂ ಇಲ್ಲ ಎಂದರು. ಇನ್ನು ಯಾರೋ ಒಬ್ಬ ನಟ ನನ್ನ ಧ್ವನಿಯನ್ನು ಮಿಮಿಕ್ರಿ ಮಾಡಿ ಅನುಕರಣೆ ಮಾಡಿ ವಂಚಿಸಿದ್ದಾನೆ. ಈ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು.

Related Articles

Back to top button