Latest

ಡಿ.ಕೆ ಸುರೇಶ್ ಗೆ ಕೊರೊನಾ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

Home add -Advt

Related Articles

Back to top button