*ಸಂಸತ್ತಿನಲ್ಲಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಮಾತನಾಡಲು ಅವಕಾಶ ಕೊಡದೆ ಧ್ವನಿ ಅಡಗಿಸುವ ಯತ್ನ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ*
ಪ್ರಗತಿವಾಹಿನಿ ಸುದ್ದಿ: ಸಂಸತ್ತಿನಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾತನಾಡಲೂ ಅವಕಾಶ ಕೊಡದೆ, ನಮ್ಮ ಧ್ವನಿ ಅಡಗಿಸುವ ಯತ್ನ ನಡೆದಿದೆ. ಜತೆಗೆ ಕೇಂದ್ರ ಸರ್ಕಾರ ರಾಜ್ಯದ ಪ್ರತಿ ಬಡವನ ಹೊಟ್ಟೆ ಮೇಲೆ ಹೊಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ, ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಎಂಪಿಗಳಿಗೆ ನಾಚಿಕೆಯಾಗಬೇಕು.
ನಾವು ರಾಜ್ಯದ ಕೂಲಿ ಕಾರ್ಮಿಕರ ಪರವಾಗಿ ಹೋರಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆ ಹಾಗೂ ರಾಜ್ಯದ ಅಭಿವೃದ್ದಿಗೆ ಬೇಕಾದ ಅನುದಾನಕ್ಕಾಗಿ ಹೋರಾಡುತ್ತೇವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ