ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತಿಚೆಗೆ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದ ಸಂಸದ ಡಿ.ಕೆ.ಸುರೇಶ್ ಈಗ ಮತ್ತೆ ಪುನರುಚ್ಛರಿಸಿದ್ದು, ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ನನಗೆ ರಾಜಕಾರಣ ಬೇಡ. ಚುನಾವಣಾ ರಾಜಕೀಯದಿಮ್ದಲೇ ದೂರ ಉಳಿಯುತ್ತೇನೆ ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ನೆಮ್ಮದಿ ಅನ್ನೋದೆ ಇಲ್ಲವಾಗಿದೆ. ಹೊರಗೆ ಹೋದರೆ ಜನರ ಬಳಿಯೂ ನೆಮ್ಮದಿ ಇಲ್ಲ, ಇಲ್ಲಿ ಜೊತೆ ಇರುವವರ ಬಳಿಯೂ ನೆಮ್ಮದಿ ಇಲ್ಲ. ವಿಶ್ರಾಂತಿ ಬೇಕಾಗಿದೆ… ಹಾಗಾಗಿ ಎಲ್ಲದರಿಂದ ದೂರ ಉಳಿಯುವೆ ಎಂದು ಹೇಳುವ ಮುಲಕ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ