
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ.ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್, ನನಗೆ ಸಂಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ರಾಜ್ಯದ ಹಿತದೃಷ್ಟಿಯಿಂದ ಡಿಕೆಶಿ ಒಪ್ಪಿದ್ದಾರೆ ಎಂದು ಹೇಳಿದರು.
ನಾವು ನೀಡಿರುವ ಭರವಸೆಯನ್ನು ಮೊದಲು ಈಡೇರಿಸಬೇಕಾಗಿದೆ. ಅದಕ್ಕಾಗಿ ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ