CrimeKannada NewsKarnataka News

*ಧಾರವಾಡ ಯುವ ಕಾಂಗ್ರೆಸ್‌ ಮುಖಂಡನ ಭೀಕರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಮನೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಧಾರವಾಡ ನಗರದ ಹಾಶ್ಮಿನಗರದಲ್ಲಿ ಈ ಭೀಕರ ಕೊಲೆ ನಡೆದಿದೆ. ಧಾರವಾಡ ನಗರದ ಮನೆಯಲ್ಲೇ ಕೊಲೆ ನಡೆದಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಫೈರೋಜ್ ಪಠಾಣ್ ಈ ಮೊದಲು ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. ಆದ್ರೆ ಕೊಲೆ ಯಾರು ಮಾಡಿದ್ದಾರೆ? ಕಾರಣ ಏನು ಅನ್ನೋದು ಇನ್ನಷ್ಟೇ ತಿಳಿಯಬೇಕಿದೆ

ಸದ್ಯ ಫೈರೋಜ್ ಆಪ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸ ಕಮಿಷನರ್ ಶಶಿಕುಮಾತ ಭೇಟಿ ನೀಡಿದ್ದಾರೆ. ಇತ್ತ ಫೈರೋಜ್‌ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button