Karnataka NewsLatestPolitics

*ಕಲ್ಲು ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ದುರ್ಮರಣ: ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ*

ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

Home add -Advt

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಘಟನೆಯ ಕುರಿತು ವಿವರ ವರದಿ ಕೇಳಿರುವುದಾಗಿ ಅವರು ತಿಳಿಸಿದ್ದಾರೆ.

ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

Related Articles

Back to top button