Karnataka NewsLatestPolitics

*ವಿಧಾಸೌಧದಲ್ಲಿ “ಶತಕದ ಪಥ, ಪ್ರಗತಿಯ ರಥ” ವಿಶೇಷ ಕಾರ್ಯಕ್ರಮ*

‘ದೃಢ ಕರ್ನಾಟಕದ ಸಂಕಲ್ಪ’: ಸರ್ಕಾರದ 100 ದಿನಗಳ ಯಶಸ್ವಿ ಆಡಳಿತ

Home add -Advt

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಆಡಳಿತವು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, “ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ” ಎಂಬ ವಿಶೇಷ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ 2026ನೇ ಸೆಪ್ಟೆಂಬರ್ 10 ರ ಗುರುವಾರ ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಜಿ. ಪರಮೇಶ್ವರ್, . ರಾಜ್ಯ ಸಂಪುಟದ ಎಲ್ಲಾ ಸಚಿವರು, ಶಾಸಕರು ಮತ್ತು ರಾಜ್ಯ ಸಭಾ‌ ಸದಸ್ಯರು, ಲೋಕಸಭಾ‌ ಸದಸ್ಯರು ಹಾಗೂ ವಿಧಾನಪರಿಷತ್ತಿನ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ:

ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಒಳಗೊಂಡಂತೆ, ಸಮಾಜದ ವಿವಿಧ ವರ್ಗಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಸಂವಾದ ನಡೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಪೌರಕಾರ್ಮಿಕರು ಭಾಗವಹಿಸಲಿದ್ದು, ರಾಜ್ಯ ಸರ್ಕಾರದ ಜನಪರ ಯೋಜನೆಗಳು ಜನರ ಜೀವನದಲ್ಲಿ ತಂದಿರುವ ಬದಲಾವಣೆಗಳು ಮತ್ತು ಅಭಿವೃದ್ಧಿಯ ಮುಂದಿನ ಹಾದಿಯ ಕುರಿತು ಚರ್ಚೆ ನಡೆಯಲಿದೆ.

Related Articles

Back to top button