ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಕ್ಕಲಿಗರಿಗೆ 2ಸಿ, ಲಿಂಗಾಯಿತರಿಗೆ 2ಡಿ ಮೀಸಲಾತಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳಿಗೆ ಕರೆ ಮಾಡಿ ಪದೇ ಪದೇ ಒಪ್ಪಿಕೊಳ್ಳಿ ಎಂದು ಸರ್ಕಾರದಿಂದ ಒತ್ತಡಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಒಕ್ಕಲಿಗರಿಗೆ 2ಸಿ, ಲಿಂಗಾಯಿತರಿಗೆ 2ಡಿ ಮೀಸಲಾತಿ ಘೋಷಣೆ ವಿಚಾರವಾಗಿ ನಿರ್ಮಲಾನಂದನಾಥ ಶ್ರೀಗಳು ಹಾಗೂ ಬಸವಜಯ ಮೃತ್ಯುಂಜಯ ಶ್ರೀಗಳಿಗೆ 25 ಬಾರಿ ಕರೆ ಮಾಡಿ ಒಪ್ಪಿಕೊಳ್ಳಿ ಎಂದು ಒತ್ತಡ ಹಾಕಿದ್ದಾರೆ ಎಂದರು.
ಸ್ವಾಮಿಜಿಗಳಿಗೆ ಫೋನ್ ಮಾಡಿ ಒಪ್ಪಿಕೊಳ್ಳಿ ಎಂದು ಒತ್ತಾಯಿಸುವುದು ಸರಿನಾ? ಲಿಂಗಾಯಿತರು 16%, ಒಕ್ಕಲಿಗರು 12% ಮೀಸಲಾತಿ ಕೇಳಿದ್ದರು. ಅಲ್ಪಸಂಖ್ಯಾತದ ಮೀಸಲಾತಿ ಕಿತ್ತುಕೊಂಡು ಕೊಡುವುದೇನಿತ್ತು? ಬಿಜೆಪಿಗರು ಅಧಿಕಾರ ದುರುಪಯೋಗಮಾಡಿಕೊಂಡು ಎಲ್ಲಾ ಜನರಿಗೂ ಮೋಸ ಮಾಡಲು ಹೊರಟಿದ್ದಾರೆ. ಸರ್ಕಾರದ ಧೋರಣೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ