Kannada NewsKarnataka NewsLatest

*ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಶೆಟ್ಟೆಣ್ಣವರ್ ಎಸ್.ಬಿ ನೇಮಕ: ವರ್ಗಾವಣೆಗೊಂಡ IAS, IPS ಅಧಿಕಾರಗಳ ಮಾಹಿತಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಹಲವು ಐಪಿಎಸ್, ಐಎ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ, ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

Home add -Advt

ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸ್ಥಳ ನಿಯೋಜನೆಗೆ ನಿರೀಕ್ಷಿಸುತ್ತಿದ್ದ ಐಪಿಎಸ್ ಅಧಿಕಾರಿ ಶೆಟ್ಟಣ್ಣವರ್ ಎಸ್ ಬಿ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕೃಷಿ ಇಲಾಖೆ ಕಾರ್ಯದರ್ಶಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ.ಪ್ರಸಾದ್ ಅವರನ್ನು ಬಿಡುಗಡೆಗೊಳಿಸಲಾಗಿದೆ.

ಐಎಎಸ್ ಅಧಿಕಾರಿ ಅಕ್ರಂ ಪಾಷಾ ಅವರನ್ನು ಕೆ.ಎಸ್.ಆರ್.ಟಿ.ಸಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.


Related Articles

Back to top button