ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಮರದಿಂದಾಗಿ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೀಡಾಗಿದೆ. ಇದರ ಬೆನ್ನಲ್ಲೇ ಅಧಿಕಾರಿಗಳಿಬ್ಬರಿಗೂ ಈಗಾಗಲೇ ನೋಟೀಸ್ ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹಾಸನ ಜಿಲ್ಲೆ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ ಸರ್ಕಾರದ ಮುಖ್ಯಕಾರ್ಯದರ್ಶಿ ಮೂಲಕವಾಗಿ ಅಧಿಕಾರಿಗಳಿಬ್ಬರಿಗೂ ಲಿಖಿತವಾಗಿ ಸೂಚನೆ ನೀಡಲಾಗಿದೆ. ನಿನ್ನೆ ಸಿಎಸ್ ಇಬ್ಬರೂ ಅಧಿಕಾರಿಗಳನ್ನು ಕರೆದು ಮಾತನಾಡಿದ್ದಾರೆ. ನಿಯಮ ಪ್ರಕಾರ ನಡೆದುಕೊಳ್ಳದಿದ್ದರೆ ಸಿಎಸ್ ಕ್ರಮ ಕೈಗೊಳ್ಳುತ್ತಾರೆ ಎಂದರು.
ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ಸಿಎಸ್ ನೋಟೀಸ್ ಜಾರಿ ಮಾಡಿ ಸೂಚನೆ ಕೊಟ್ಟಿದ್ದಾರೆ. ಯಾವಾಕ ಏನು ಕ್ರಮ ಕೈಗೊಳ್ಳಬೇಕು ಸರ್ಕಾರಕ್ಕೆ ಗೊತ್ತಿದೆ. ಈಗಾಗಲೇ ಸಿಎಸ್ ಅವರಿಗೆ ಸೂಚನೆ ಕೊಟ್ಟಿದ್ದೇವೆ. ನಮ್ಮ ಕಡೆಯಿಂದ ಯಾವುದೆ ಗೊಂದಲಗಳಿಲ್ಲ. ಮುಂದಿನ ದಿನಗಳಲ್ಲಿ ಏನು ಕ್ರಮ ಆಗಬೆಕೋ ಅದು ಆಗುತ್ತೆ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.
*ನನ್ನನ್ನು ಯಾರು ತಡಿತಾರೆ ನೋಡ್ತೀನಿ; ಸರ್ಕಾರದ ಎಚ್ಚರಿಕೆಗೂ ಕೇರ್ ಮಾಡದ ಡಿ.ರೂಪಾ; ಇನ್ನಷ್ಟು ಫೋಟೋ ರಿಲೀಸ್*
https://pragati.taskdun.com/d-rooparohini-sindhurihome-photospost/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ