Latest

*ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್; ಸಿಎಂ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇಬ್ಬರು ಅಧಿಕಾರಿಗಳಬೇಜವಾಬ್ದಾರಿ ವರ್ತನೆ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ನೋಟೀಸ್ ಜಾರಿ ಮಾಡುವಂತೆ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಅಧಿಕಾರಿಗಳ ಬೇಜವಾಬ್ದಾರಿತನವನ್ನು ಸಹಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ನೋಟೀಸ್ ಜಾರಿಮಾಡುವಂತೆ ಸಿಎಸ್ ಅವರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

*ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ದಿ ಆಕ್ರೋಶ*

https://pragati.taskdun.com/sudhir-reddypressmeetd-rooparohini-shindhuri/

Related Articles

Back to top button