*ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್ ಜಾರಿ; ಇಬ್ಬರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಂಘರ್ಷಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರೂ ಮಹಿಳಾ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ ಖಡಕ್ ವಾರ್ನಿಂಗ್ ಕೊಟ್ಟಿದೆ.
ಪರಸ್ಪರ ಆರೋಪ ಪ್ರತ್ಯಾರೋಗಳನ್ನು ಮಾಡಿ, ಸೇವಾ ನಿಯಮ ಉಲ್ಲಂಘಿಸಿ ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡಿರುವುದು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಸಮಸ್ಯೆಗಳಿದ್ದರೆ ಸರ್ಕಾರದ ಗಮನಕ್ಕೆ ತರಬೇಕು. ಬಹಿರಂಗ ಹೇಳಿಕೆಗಳನ್ನ ನೀಡಬಾರದು ಎಂದು ತಾಕೀತು ಮಾಡಿದೆ.
ಅಧಿಕಾರಿಗಳು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ಖಡಕ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಅಧೀನ ಕಾರದರ್ಶಿ ಇಬ್ಬರೂ ಮಹಿಳಾ ಅಧಿಕಾರಿಗಳಿಗೆ ನೋಟೀಸ್ ನೀಡಿದ್ದಾರೆ.
ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ 19 ಗುರುತರ ಆರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಫೋಟೋ ಹರಿಬಿಟ್ಟಿದ್ದರು. ಅಲ್ಲದೇ ಮಾಧ್ಯಮಗಳ ಮುಂದೆ ಬಂದು ಬಹಿರಂಗವಾಗಿ ರೋಹಿಣಿ ವಿರುದ್ಧ ಆರೋಪಿಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ರೋಹಿಣಿ ಸಿಂಧೂರಿ ಕೂಡ ಮಾಧ್ಯಮಗಳ ಮುಂದೆ ಮಾತನಾಡಿದ್ದರು. ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟ ಬಿದಿ ರಂಪ ವಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಬ್ಬರಿಗೂ ನೋಟಿಸ್ ಜಾರಿ ಮಾಡುವ ಮೂಲಕ ವಾರ್ನಿಂಗ್ ನೀಡಿದೆ.
*ಪರೇಶ್ ಮೇಸ್ತಾ ಸಾವು ಪ್ರಕರಣ; ಕಾಗೇರಿ ಸೇರಿದಂತೆ 122 ಜನರ ವಿರುದ್ಧ ದಾಖಲಾಗಿದ್ದ ಕೇಸ್ ಹಿಂಪಡೆದ ಸರ್ಕಾರ*
https://pragati.taskdun.com/paresh-mesta-casecm-basavaraj-bommaaisiddaramaiah-govt/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ