
ಪ್ರಗತಿವಾಹಿನಿ ಸುದ್ದಿ: ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.
ಟೆಹ್ರಾನ್ ನಗರದಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ. ಇರಾನ್ ಸಂಭಾವ್ಯ ದಾಳಿಗೆ ಪ್ರತಿಕ್ರಿಯೆಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ದಾಲಿ ನಡೆಸಲಾಗಿದೆ ಎಂದು ಇಸ್ರೇಲ್ ಸ್ಪಷ್ಟಪಡಿಸಿದೆ.
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಈ ದಾಳಿ ನಡೆದಿದ್ದು, ಟೆಹರಾನ್ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ.
2025ರ ಜೂನ್‌ನಲ್ಲಿ 12 ದಿನಗಳ ಕಾಲ ನಡೆದ ಇರಾನ್–ಇಸ್ರೇಲ್ ವಾಯುಯುದ್ಧದ ಬಳಿಕ ಈ ದಾಳಿ ನಡೆದಿದೆ. ಇರಾನ್ ತನ್ನ ಅಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮ ಮುಂದುವರಿಸಿದರೆ ಮತ್ತೆ ದಾಳಿ ನಡೆಸುವುದಾಗಿ ಅಮೆರಿಕಾ ಮತ್ತು ಇಸ್ರೇಲ್ ಮುಂಚೆಯೇ ಎಚ್ಚರಿಸಿದ್ದವು. ಇಂದು (ಶನಿವಾರ) ನಡೆದ ಇಸ್ರೇಲ್ ಕಾರ್ಯಾಚರಣೆ ಅಮೆರಿಕದ ಜೊತೆ ಸಂಯೋಜಿತವಾಗಿತ್ತು ಎಂದು ಇಸ್ರೇಲಿ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


