Latest

*ಬಿರಿಯಾನಿ ಸೆಂಟರ್‌ ಕುಸಿತ: ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಹಳೆಯ ಕಟ್ಟಡವೊಂದು ಕುಸಿದು ಹಲವರು ಗಾಯಗೊಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ಇಂದು ನಡೆದಿದೆ. 

ಅಂಬೂರ್ ಬಿರಿಯಾನಿ ಸೆಂಟರ್‌ ಕಟ್ಟಡ ಕುಸಿತಗೊಂಡಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ 6 ಜನ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

Related Articles

Back to top button