Latest

ಪ್ರಧಾನಿ ಮೋದಿ -ಡಿ.ವಿ.ಸದಾನಂದಗೌಡ ಚರ್ಚೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಅಂತಿಮ ಘಟಕ್ಕೆ ಬಂದುತಲುಪುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ದೆಹಲಿಯ ತಮ್ಮ ನಿವಾಸಕ್ಕೆ ಪ್ರಧಾನಿ ಮೋದಿಯವರು ಡಿವಿಎಸ್ ಅವರನ್ನು ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆ, ನಾಯಕತ್ವ ಬದಲಾವಣೆ ಬಗ್ಗೆ ಕೇಳಿಬಂದಿರುವ ಮಾತುಗಳು, ಕೆಲ ಸಚಿವರ, ಶಾಸಕರ ಅಸಮಾಧಾನದ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Home add -Advt

ಒಟ್ಟಾರೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವ ಮೊದಲೇ ಡಿ.ವಿ.ಸದಾನಂದ ಗೌಡ ಹಾಗೂ ಪ್ರಧಾನಿ ಮೋದಿ ಭೇಟಿ ನಾಯಕತ್ವ ಬದಲಾವಣೆ ಚೆರ್ಚೆ ಬೆನ್ನಲ್ಲೇ ಮಹತ್ವದ ತಿರುವಿಗೆ ಕಾರಣವಾಗುತ್ತಾ ಕಾದುನೋಡಬೇಕಿದೆ.

ವೈರಲ್ ಆಯ್ತು ಪ್ರಗತಿವಾಹಿನಿ ಸುದ್ದಿ; ಆ ಸುದ್ದಿಗೆ ಲಕ್ಷ ದಾಟಿದ ಓದುಗರು

Related Articles

Back to top button