Cancer Hospital 2
Bottom Add. 3

*ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ*

ಪ್ರಗತಿವಾಹಿನಿ ಸುದ್ದಿ; ಹಾಸನ: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ.ಸದಾನಂದಗೌಡ, ಚುನಾವಣಾ ರಾಜಕೀಯದಲ್ಲಿ ಮುಂದುವರೆಯದಿರಲು ತೀರ್ಮಾನಿಸಿದ್ದೇನೆ. ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷದಿಂದ ಗರಿಷ್ಠ ಲಾಭಾಂಶ ಪಡೆದಿದ್ದೇನೆ. ಹೆಚ್ಚಿನದೇನೂ ಬಯಸಲ್ಲ ಎಂದಿದ್ದಾರೆ.

ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯಾಧ್ಯಕ್ಷನಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ 7 ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಇನ್ನೂ ಆಸೆಪಟ್ಟರೆ ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ ಎಂದು ಹೇಳಿದ್ದಾರೆ.


Bottom Add3
Bottom Ad 2

You cannot copy content of this page