Latest

ದೈವ ನರ್ತನ ಮಾಡುವವರಿಗೆ ಮಾಸಾಶನ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿಸಿ ನಟಿಸಿರುವ ಕಾಂತಾರಾ ಚಿತ್ರ ರಾಷ್ಟ್ರ ಮಟ್ಟದಲ್ಲಿ ಜನಪ್ರಿಯತೆ ಪಡೆಯುತ್ತಿದೆ. ಚಿತ್ರದಲ್ಲಿನ ತುಳು ನಾಡಿನ ಸಂಸ್ಕೃತಿ ಬಿಂಬಿಸುವ ಭೂತಕೋಲ, ದೈವ ಕುಣಿತ, ದೈವಾರಾಧನೆ ಇದೀಗ ಎಲ್ಲೆಡೆ ಗಮನ ಸೆಳೆದಿದೆ. ಇದರ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಕಹೆ ಮಹತ್ವದ ಘೋಷಣೆ ಮಾಡಿದೆ.

ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲಾಗುವುದು. 60 ವರ್ಷ ಮೇಲ್ಪಟ್ಟವರಿಗೆಪ್ರತಿ ತಿಂಗಳು 2000 ರೂಪಾಯಿ ಮಾಸಾಶನ ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಕಾಂತಾರಾ ಚಿತ್ರದ ಭೂತಕೋಲ ವಿಚಾರವಾಗಿ ನಟ ಚೇತನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತನಾಡಬಾರದು. ದೈವ ನರ್ತನ ಹಿಂದೂ ಸಂಸ್ಕೃತಿ ಒಂದು ಭಾಗ. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ ಎಂದು ಹೇಳಿದರು.

 ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ PFI ಸಂಚು

https://pragati.taskdun.com/latest/ayodhya-ramamandirablast-planepfi4-arresednia/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button