Kannada NewsKarnataka NewsLatest
*ಫುಟ್ ಪಾತ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಫುಟ್ ಪಾತ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳದ ಬಿಸಿ ರೋಡ್ ನಲ್ಲಿ ಎನ್ ಜಿ ವೃತ್ತದ ಫುಟ್ ಪಾತ್ ಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬೆಂಗಳೂರ್ನ ಪೀಣ್ಯಾ ನಿವಾಸಿಗಳಾದ ರಮ್ಯಾ (23), ರವಿ (64) ನಂಜಮ್ಮ (75) ಎಂದು ಗುರುತಿಸಲಾಗಿದೆ. ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನಿಬ್ಬರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.




