Karnataka News

*ಹಿಂದೂ ಸಂಘಟನೆಯ 15 ಮುಖಂಡರ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಹಿಂದೂ ಸಂಘಟನೆ ಕಾರ್ಯಕರ್ತರು, ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.

ಜಿಲ್ಲೆಯಲ್ಲಿ ಸಾಲು ಸಾಲು ಹತ್ಯೆ ಪ್ರಕರಣಗಳು, ಕೋಮು ಸೌಹಾರ್ದತೆ ಕದಡುವಂತಹ ವಾತಾವರಣ ನಿರ್ಮಾಣ್ವಾದ ಬೆನ್ನಲ್ಲೇ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ನೂತನ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. ನೂತನ ಎಸ್ ಪಿ ಹಾಗೂ ಪೊಲೀಸರು ರಾತ್ರಿ ವೇಳೆ ಹಿಂದೂ ಮುಖಂಡರ ಮನೆಗಳಿಗೆ ತೆರಳಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

Home add -Advt

ಈ ಘಟನೆ ಬೆನ್ನಲ್ಲೇ ಆಕ್ರೋಶಗೊಂಡಿರುವ ಹಿಂದೂ ಸಂಘಟನೆ ಮುಖಂಡರು ಕಡಬ ಪೊಲೀಸ್ ಠಾಣೆ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದರು. ಇದೀಗ ಯಾವುದೇ ಪೂರ್ವಾನುಮತಿ ಇಲ್ಲದೇ ಗುಂಪುಗೂಡಿ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ 15 ಹಿಂದೂ ಪರ ಸಂಘಟನೆ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪ್ರಮೋದ್ ರೈ ನಂದಗುರಿ, ತಿಲಕ್ ನಂದಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನುಂದಗುರಿ, ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.


Related Articles

Back to top button